ಮೂಕ ಪೃಥ್ವಿಗೆ ಮಾತುಕೊಟ್ಟ ಕಿಶೋರಿ 'ಗ್ರೇತಾ ಥನ್ ಬರ್ಗ್'
ಮೂಕ ಪೃಥ್ವಿಗೆ ಮಾತುಕೊಟ್ಟ ಕಿಶೋರಿ 'ಗ್ರೇತಾ ಥನ್ ಬರ್ಗ್'ಮೂಕ ಪೃಥ್ವಿಗೆ ಮಾತುಕೊಟ್ಟ ಕಿಶೋರಿ 'ಗ್ರೇತಾ ಥನ್ ಬರ್ಗ್'
ಮೂಕ ಪೃಥ್ವಿಗೆ ಮಾತುಕೊಟ್ಟ ಕಿಶೋರಿ 'ಗ್ರೇತಾ ಥನ್ ಬರ್ಗ್'
Share:
₹120
Ships within 3 days
SKU :
100
Description

ಲೇಖಕರು: ನಾಗೇಶ ಹೆಗಡೆ ಬೆಲೆ: 120/- ಪುಟಗಳು: 124 ಪ್ರಕಾಶನ: ಭೂಮಿ ಬುಕ್ಸ್, ಬೆಂಗಳೂರು ......................... ಆಸೆಯೇ ದುಃಖಕ್ಕೆ ಕಾರಣ ಎಂಬ ಪ್ರಸಿದ್ಧ ಮಾತಿದೆ. ಇದು ಬುದ್ಧನ ನುಡಿ. ಪಾಳಿ ಭಾಷೆಯಲ್ಲಿ ಆಸೆ ಎನ್ನುವುದಕ್ಕೆ ‘ತನ್ಹಾ’ ಎಂದಿದೆ. ಸಂಸ್ಕೃತದಲ್ಲಿ ‘ತೃಷ್ಣೆ’ ಎಂದಿದೆ. ಇಂಗ್ಲೀಷ್‍ನಲ್ಲಿ ಕ್ರೇವಿಂಗ್ ಎಂದಿದೆ. ಇದನ್ನು ನೋಡಿದಾಗ ‘ಆಸೆ’ ಪದ ಸಾಲದು ಅನ್ನಿಸುತ್ತದೆ. ಇದಕ್ಕೆ ಹತ್ತಿರದ ಪದ ಹುಡುಕುತ್ತ ಕಂಡದ್ದು- ‘ದಾಹ’. ‘ದಾಹ’ ಅಂದರೆ ‘ದಹಿಸುವುದು’ ಎಂದೂ ಅರ್ಥವಂತೆ. ಸದ್ಯಕ್ಕೆ ದಾಹವೇ ದುಃಖಕ್ಕೆ ಕಾರಣ- ಎಂದಿಟ್ಟುಕೊಳ್ಳಬಹುದೇನೊ.

ಇಂದು ಭೂಮಿಯೇ ಮನುಷ್ಯನ ದಾಹಕ್ಕೆ ಸಿಲುಕಿ ದಹಿಸುತ್ತಿದೆ. ಭೂಮಿ ಬಾಯಾರಿಕೆಯನ್ನು ನೀಗಿಸಬಹುದು, ದಾಹವನ್ನಲ್ಲ. ಇಂದಿನ ಮನುಷ್ಯನ ದಾಹದಿಂದಾಗಿ ತಾಪಮಾನ ಹೆಚ್ಚಾಗಿ- ಹಿಮಗಡ್ಡೆ ಕರಗುತ್ತಿವೆ. ಸಮುದ್ರದ ಮಟ್ಟ ಏರುತ್ತಿದೆ. ಸೈಕ್ಲೋನ್‍ಗಳು ಅಪ್ಪಳಿಸುತಿವೆ. ಹುಚ್ಚು ಮಳೆ ಬರುತ್ತಿದೆ. ಭೂಮಿ ಕುಸಿಯುತ್ತಿದೆ. ಎಲ್ಲವೂ ಕೊಚ್ಚಿಹೋಗುತ್ತಿದೆ. ವಿಪರ್ಯಾಸವೆಂದರೆ ಒಂದು ಕಡೆ ಪ್ರವಾಹ. ಅದರ ಪಕ್ಕದಲ್ಲೆ ನೀರಿಲ್ಲದ ಬರ. ಬದುಕುವುದೆಂತು?

ಈಗ, ಪುಣ್ಯಕ್ಕೆ ಭೂಮಿತಾಯಿಯೇ ಸ್ವೀಡನ್‍ನ ಹದಿನಾರು ವರ್ಷದ ಬಾಲೆ ಗ್ರೇತಾ ಥನ್‍ಬರ್ಗ್‍ಳ ಮೈಮೇಲೆ ಬಂದು ನುಡಿಸಿದಂತೆ ಗ್ರೇತಾ ನುಡಿಯುತ್ತಿದ್ದಾಳೆ. ಇಂದಿನ ಹವಾಮಾನ ಸಂಕಷ್ಟಕ್ಕೆ ಕಾರಣರಾದ ಜಗತ್ತಿನ ನಾಯಕರಿಗೆ ‘ಹೌ ಡೇರ್ ಯೂ?’ ಎಂದು ಕೇಳುತ್ತಿದ್ದಾಳೆ. ಹೀಗೆ ಕೇಳುತ್ತಾ ಮೂಕ ಪೃಥ್ವಿಗೆ ಮಾತು ಕೊಟ್ಟ ಈ ಹುಡುಗಿಗೆ ಇಡೀ ಭೂಮಿಯೇ ತನ್ನ ಮನೆ ಎಂಬ ಭಾವನೆ ಇದೆ ಎಂದು ಲೇಖಕರು ಗುರುತಿಸುತ್ತಾರೆ. ನಿಜ, ತನ್ನೊಳಗೇನೆ ಸಕಲ ಜೀವಸಂಕುಲವನ್ನು ಧರಿಸಿರುವಂತೆ ಈ ಬಾಲೆ ಕಾಣುತ್ತಾಳೆ. ಆಶ್ಚರ್ಯವೆಂದರೆ, ಕೆನಡಾದ ಸೆವರ್ನ್ ಸುಝಕಿ ಕೂಡ “ನಮ್ಮದು ಐದು ನೂರು ಕೋಟಿ ಜನ, ಮೂರು ಕೋಟಿ ಜೀವ ಪ್ರಬೇಧಗಳ ಒಂದು ದೊಡ್ಡ ಕುಟುಂಬ. ರಾಷ್ಟ್ರದ ಗಡಿಗಳು ಎಷ್ಟೇ ಇದ್ದರೂ ಈ ಕುಟುಂಬ ಮಾತ್ರ ಒಂದೇ. ಅದನ್ನು ಬದಲಿಸಲು ಸಾಧ್ಯವಿಲ್ಲ. ಭೂಮಿಗೆ ಸಂಕಷ್ಟ ಬಂದರೆ ನಮಗೆಲ್ಲರಿಗೂ ಬಂದ ಹಾಗೇ. ನಮಗೆಲ್ಲರಿಗೂ ಒಂದೇ ಬಗೆಯ ನಾಳೆಗಳು ಕಾದಿವೆ. ನಾವೆಲ್ಲ ಒಂದಾದರೆ ಮಾತ್ರ ನಾಡಿನ ಭೂಮಿ ಜೀವಂತವಿರಲು ಸಾಧ್ಯ” ಎನ್ನುತ್ತಾಳೆ. ಭಾರತ ಮೂಲದ ಅಂಜಲಿ ಅಪ್ಪಾದುರೈ ಕೂಡ ಹೀಗೇಯೆ ಮಾತಾಡುತ್ತಿದ್ದಾಳೆ. ಬಾಲ್ಯಕ್ಕೆ ಮಾತ್ರ ಇಂತಹ ಧಾರಣಾಶಕ್ತಿ ಇದೆಯೆ?

-ದೇವನೂರ ಮಹಾದೇವ (ಮುನ್ನುಡಿಯಿಂದ)

ಅಭಿನವ24 products on store
Payment types
Create your own online store for free.
Sign Up Now